ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಸಾರ್ವಜನಿಕ ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಸಾರ್ವಜನಿಕ ಗಣಪತಿ ಮೆರವಣಿಗೆಗಳು ಭಾರಿ ಪ್ರಮಾಣದಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳ ಮೂಲಕ ಹಾದು ಹೋಗಲಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಬಾರ್, ಪಬ್, ರೆಸ್ಟೋರೆಂಟ್​ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧಿಸಲಾಗಿದೆ.

ಬೆಂಗಳೂರಿನ ಈಶಾನ್ಯ ಹಾಗೂ ಪೂರ್ವ ವಿಭಾಗದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸೆ. 3ರ ಸಂಜೆ 6 ರಿಂದ ಸೆ. 5ರ ಬೆಳಗ್ಗೆ 6 ಗಂಟೆಯವರೆಗೂ ಮದ್ಯ ಮಾರಾಟ ನಿಷೇಧಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.

ಈಶಾನ್ಯ ವಿಭಾಗದ ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧವಿರಲಿದೆ. ಪೂರ್ವ ವಿಭಾಗದ ಕೆ.ಜಿ.ಹಳ್ಳಿ, ಗೋವಿಂದಪುರ, ಡಿ.ಜೆ.ಹಳ್ಳಿ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿ ನಗರ, ಹಲಸೂರು ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟ ನಿಷೇಧವಿರಲಿದೆ.

Edited By : Nagaraj Tulugeri
PublicNext

PublicNext

02/09/2022 10:30 pm

Cinque Terre

21.44 K

Cinque Terre

0

ಸಂಬಂಧಿತ ಸುದ್ದಿ