ಬೆಂಗಳೂರು: ಲೋಕಾಯುಕ್ತ ಮರುಸ್ಥಾಪನೆಯಾದ ಬೆನ್ನಲ್ಲೇ ಅದರ ಘರ್ಜನೆ ಆರಂಭವಾಗಿದೆ. ಬಿಬಿಎಂಪಿ ಪಶ್ಚಿಮ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ರೇಡ್ ಮಾಡಿದೆ. ಶ್ರೀನಿವಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್.ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಮೊದಲ ಲೋಕಾಯುಕ್ತ ದಾಳಿ ನಡೆದಿದೆ. ಮಂತ್ರಿಮಾಲ್ ಎದುರಿರುವ ಮಲ್ಲೇಶ್ವರಂನ ಬಿಬಿಎಂಪಿ ಕಚೇರಿ ಮೇಲೆ ದಾಳಿ ಮಾಡಲಾಗಿದೆ
4 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಶ್ರೀನಿವಾಸ್‌ರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಖಾತೆ ಬದಲಾವಣೆ ವಿಚಾರವಾಗಿ ಶ್ರೀನಿವಾಸ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮಧ್ಯಾಹ್ನ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ವೇಳೆ ಶ್ರೀನಿವಾಸ್ ಅವರ ಪಿಎ ಉಮೇಶ್ ಅವರು ಹಣದ ಸಮೇತ ನಿಂತಿದ್ದರು. ಲೋಕಾಯುಕ್ತ ಅಧಿಕಾರಿಗಳು ಶ್ರೀನಿವಾಸ್ ಹಾಗೂ ಅವರ ಪಿಎ ಅನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
PublicNext
12/09/2022 05:06 pm