ಬೆಂಗಳೂರು: ದಂತ ವೈದ್ಯೆಯೊಬ್ಬರು ತನ್ನ ಮಗಳನ್ನೇ ನಾಲ್ಕನೇ ಮಹಡಿಯಿಂದ ಕೆಳಗೆ ಎಸೆದ ಅಮಾನವೀಯ ಕ್ರೌರ್ಯವು ಬೆಂಗಳೂರಿನ ಸಂಪಂಗಿರಾಮನಗರದ ಅದ್ವಿತ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಈ ಭಯಾನಕ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತ ಬಾಲಕಿಯನ್ನು ಜಿತಿ ಎಂದು ಗುರುತಿಸಲಾಗಿದೆ. ಹಂತಕಿ ಸುಶ್ಮಾ ದಂತ ವೈದ್ಯೆಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದಾಳೆ. ಇನ್ನು ಬಾಲಕಿಯ ತಂದೆ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮಗು ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ಈ ಕ್ರೂರ ದಂತ ವೈದ್ಯೆ ಇಂತಹ ಹೇಯ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.
ನಾಲ್ಕನೇ ಮಹಡಿಯಿಂದ ಎಸೆಯಲ್ಪಟ್ಟ ಬಿದ್ದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಗುವನ್ನು ಎಸೆದ ಬಳಿಕ ಹಂತಕಿ ಸುಶ್ಮಾ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕಳೆದ ಮೂರು ತಿಂಗಳ ಹಿಂದೆಯೇ ಸುಶ್ಮಾ ರೈಲ್ವೆ ಸ್ಟೇಷನ್‌ನಲ್ಲಿ ಮಗುವನ್ನು ಬಿಟ್ಟು ಬಂದಿದ್ದಳು. ತಂದೆ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು.
ಈ ಸಂಬಂಧ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
05/08/2022 12:35 pm