ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 17 ವರ್ಷಗಳಿಂದ ಭಾರತದಲ್ಲಿ ಅಕ್ರಮ ವಾಸ‌!; ಉಗಾಂಡ‌‌ ಪ್ರಜೆ ಗಡೀಪಾರು

ಬೆಂಗಳೂರು: ನಕಲಿ ದಾಖಲಾತಿ ಸೃಷ್ಟಿಸಿಕೊಂಡು ವಿದೇಶಿ ಪ್ರಜೆಗಳ ವೀಸಾ ಹಾಗೂ ಪಾಸ್ ಪೋರ್ಟ್ ನವೀಕರಿಸಲು ಸಹಕರಿಸಿ ಭಾರತದಲ್ಲಿ ಸುಮಾರು 17 ವರ್ಷಗಳಿಂದಲೂ ಅಕ್ರಮವಾಗಿ ನೆಲೆಸಿದ್ದ ಉಗಾಂಡ ದೇಶದ ಪ್ರಜೆಯನ್ನು ಕೊನೆಗೂ ಗಡೀಪಾರು ಮಾಡಲಾಗಿದೆ‌. ಬೋಸ್ಕೊ ಕಾವೇಸಿ ಎಂಬಾತ ಗಡೀಪಾರಾದ ಆರೋಪಿ‌.

ಈತನ ವೀಸಾ ಅವಧಿ 2005ರಲ್ಲಿ ಮುಗಿದಿದ್ದರೂ ಅಕ್ರಮವಾಗಿ ವಾಸವಾಗಿದ್ದ. ಭಾರತೀಯ ಯುವತಿಯನ್ನೂ ಮದುವೆಯಾಗಿದ್ದ. ದೇಶದಲ್ಲಿ ನೆಲೆಸಲು ಅವಕಾಶ ಕೋರಿ ಹೈಕೋರ್ಟ್ ಮೊರೆ ಹೋಗಿದ್ದ. ಈತನ ಅರ್ಜಿಯನ್ನು 2022ರಲ್ಲಿ ಕೋರ್ಟ್‌ ತಿರಸ್ಕರಿಸಿತ್ತು. ಈ ಸಂಬಂಧ ವಿದೇಶಿ ನೋಂದಣಿ‌ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ‌ ನೀಡಿದ ಮಾಹಿತಿ ಮೇರೆಗೆ ದೆಹಲಿ ಇಮಿಗ್ರೇಷನ್‌ ಅಧಿಕಾರಿಗಳು ಜುಲೈ 19ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಬಾಣಸವಾಡಿ ಪೊಲೀಸರ ಸಹಾಯದಿಂದ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಪರಿಶೀಲಿಸಿದಾಗ 26 ವಿದೇಶಿಯರ ಪಾಸ್ ಪೋರ್ಟ್ ಗಳನ್ನ ಜಪ್ತಿ ಮಾಡಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್‌ ರೆಡ್ಡಿ ತಿಳಿಸಿದ್ದಾರೆ. ಅಕ್ರಮವಾಗಿ ನೆಲೆಸಿರುವ ವಿದೇಶಿಯರಿಗೆ ನಕಲಿ ದಾಖಲಾತಿ ನೀಡುತ್ತಿದ್ದ‌ ಬೋಸ್ಕೋ, ಮಾನವ ಕಳ್ಳಸಾಗಣೆ, ಬಲವಂತವಾಗಿ ಹಣ‌ ಪಡೆಯುವುದು, ವಂಚನೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಎಂದು‌ ಪೊಲೀಸರು ಮಾಹಿತಿ ನೀಡಿದ್ದಾರೆ.

Edited By : Manjunath H D
PublicNext

PublicNext

29/07/2022 02:20 pm

Cinque Terre

29.56 K

Cinque Terre

0

ಸಂಬಂಧಿತ ಸುದ್ದಿ