ಬೆಂಗಳೂರು : ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯನ್ನ ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಲು ಇಲಾಖೆ ಹೊಂದಿದ್ದ ಟ್ವಿಟರ್ ಖಾತೆಯಯನ್ನ ಎರಡು ದಿನಗಳ ಹಿಂದೆ ಹ್ಯಾಕ್ ಮಾಡಲಾಗಿದ್ದು, ಅಸಂಬದ್ಧವಾಗಿ ಸರಣಿ ಟ್ವೀಟ್ ಮಾಡಲಾಗುತ್ತಿದೆ.
ಸದ್ಯ ಖಾತೆ ಹ್ಯಾಕ್ ಆಗಿರುವುದನ್ನ ಗಮನಿಸಿರುವ ಇಲಾಖೆಯ ಡಿಜಿಟಲ್ ಕಮ್ಯುನಿಕೇಷನ್ ತಂಡ ಸೈಬರ್ ಕ್ರೈಂ ಪೊಲೀಸರಿಗೆ ಮಾಹಿತಿ ನೀಡಿದ್ದು ಪರಿಶೀಲನೆ ನಡೆಸಲಾಗುತ್ತಿದೆ.
ಈ ಹಿಂದೆಯೂ ಸಹ ಸೈಬರ್ ವಂಚಕರು ಜಯನಗರ ಸಂಚಾರಿ ಪೊಲೀಸ್, ವಿವೇಕನಗರ ಪೊಲೀಸ್ ಠಾಣೆ ಸೇರಿದಂತೆ ಅನೇಕ ಅಧಿಕೃತ ಟ್ವಿಟರ್ ಖಾತೆಗಳನ್ನ ಹ್ಯಾಕ್ ಮಾಡಿ ಅಸಂಬದ್ಧ ಟ್ವೀಟ್ ಮಾಡಿರುವ ಪ್ರಕರಣಗಳು ವರದಿಯಾಗಿದ್ದವು.
PublicNext
03/10/2022 02:34 pm