ದೇವನಹಳ್ಳಿ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಠಾಣೆಗೆ ಕರೆದುಕೊಂಡು ಹೋದ ಪೊಲೀಸರು ಕಳ್ಳತನ ಮಾಡಿದ್ದಾಗಿ ಒಪ್ಪಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಕಳ್ಳತನ ಪ್ರಕರಣ ಒಪ್ಪಿಕೊಳ್ಳದಿದ್ದಾಗ ಕೈ ಕಾಲು ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ದೇವನಹಳ್ಳಿ ತಾಲೂಕು ಧರ್ಮಪುರ ಗ್ರಾಮದ ನಿವಾಸಿ ಪ್ರಕಾಶ್ (39) ವಿಜಯಪುರ ಪೊಲೀಸರು ನೀಡಿದ ಥರ್ಡ್ ಡಿಗ್ರಿ ಟ್ರೀಟ್‌ಮೆಂಟ್‌ನಿಂದ ನೆಲಕ್ಕೆ ಕಾಲೂರುವುದಕ್ಕೂ ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದಾನೆ ನರಳುತ್ತಿದ್ದಾನೆ. ಡಿಸೆಂಬರ್ 11 ರಾತ್ರಿ 7 ಗಂಟೆಯ ಸಮಯದಲ್ಲಿ ವಿಜಯಪುರ ಪೊಲೀಸರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ್ ನನ್ನ ಕರೆದು ಕೊಂಡು ಹೋಗಿದ್ದಾರೆ. ಕಳ್ಳತನ ಪ್ರಕರಣವನ್ನ ಒಪ್ಪಿಕೊಳ್ಳುವಂತೆ ಠಾಣೆಯ ಸಬ್ ಇನ್ಸ್ಪೆಕ್ಟರ್ ನಂದೀಶ್ ಮತ್ತು ಪೊಲೀಸ್ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.
Kshetra Samachara
15/12/2021 11:43 am