ಚಿಕ್ಕಬಳ್ಳಾಪುರ : ನೈಟ್ ಕರ್ಫ್ಯೂ ಉಲ್ಲಂಘನೆ ಮಾಡಿ ಪಾರ್ಟಿ ಆಯೋಜನೆ ಮಾಡಿರುವುದಕ್ಕೆ ಕ್ರಮ ಜರುಗಿಸಲು ಮುಂದಾದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಮಾಡಲಾಗಿರುವ ಕುರಿತು 8 ಜನ ಆರೋಪಿಗಳನ್ನು ನಂದಿಗಿರಿಧಾಮ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಅಗಲಗುರ್ಕಿ ಗ್ರಾಮದ ಬಳಿಯ ವೈಟ್ ನಿರ್ವಾಣ್ ಬೈ ಜಡೆ ರೆಸಾರ್ಟ್ನಲ್ಲಿ ನ್ಯೂ ಇಯರ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ತಡರಾತ್ರಿ ವರೆಗೂ ಮೋಜು ಮಸ್ತಿ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದ ಇನ್ಸ್ ಪೆಕ್ಟರ್ ಮೇಲೆಯೇ ಪಾರ್ಟಿಗೆ ಬಂದಿದ್ದ 8 ಜನ ಹಲ್ಲೆಗೆ ಯತ್ನಿಸಿ ಸದ್ಯ ಪೊಲೀಸರ ಅತಿಥಿಗಳಾಗಿದ್ದಾರೆ.
PublicNext
01/01/2022 10:25 am