ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಎಂ ಮನೆ ಮುಂದೆ 'ಖಾಕಿ' ಗಾಂಜಾ ಘಾಟು- ಕೇಸ್‌ ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಪೊಲೀಸರಿಂದಲೇ ಗಾಂಜಾ ಮಾರಾಟ ನಡೆದಿದೆ ಎಂಬ ಪ್ರಕರಣವನ್ನು ಸಿಸಿಬಿ ಹೆಗಲಿಗೆ ವಹಿಸಲಾಗಿದೆ.

ಆರ್‌.ಟಿ. ನಗರದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಬಳಿ ಗಾಂಜಾ ಮಾರುತ್ತಿದ್ದರೂ ಅವರಿಗೆ ಮಾಹಿತಿ ಇರಲಿಲ್ಲ. ಮಾಹಿತಿ ಬಂದ ಮೇಲೂ ಸ್ಥಳಕ್ಕೆ ತೆರಳಿರಲಿಲ್ಲ. ಕಂಟ್ರೋಲ್ ರೂಮ್‌ನಿಂದ ಕರೆ ಬಂದ ಬಳಿಕ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎಫ್ ಐ ಆರ್ ಹಾಕುವಾಗಲೂ ಗಂಭೀರವಾಗಿ ಹಾಕದೆ ಗಾಂಜಾ ಕೇಸ್ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಶ್ವಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಹಿನ್ನೆಲೆ ಮುಂದಿನ ತನಿಖೆ ಕೂಲಂಕುಷವಾಗಿ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತನಿಖೆಯ ಜವಾಬ್ದಾರಿಯನ್ನ ಕೇಂದ್ರ ಅಪರಾಧ ವಿಭಾಗಕ್ಕೆ ಹಸ್ತಾಂತರ ಮಾಡಿದ್ದಾರೆ.

Edited By : Vijay Kumar
PublicNext

PublicNext

20/01/2022 12:18 pm

Cinque Terre

16.79 K

Cinque Terre

0

ಸಂಬಂಧಿತ ಸುದ್ದಿ