ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಾಂಗ್ಲಾದಿಂದ ಬಂದು ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಹಿಳೆ ಅರೆಸ್ಟ್

ಬೆಂಗಳೂರು: ಭಾರತದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಸಾಕಷ್ಟಿದ್ದಾರೆ. ಅವರ ಪತ್ತೆಗೆ ಸರ್ಕಾರ ವಿಶೇಷ ಕಾರ್ಯಾಚರಣೆ ಕೂಡ ನಡೆಸುತ್ತಿದೆ. ಬಾಂಗ್ಲಾ ದೇಶದಿಂದ ಬಂದು ಭಾರತದಲ್ಲಿ ಹಿಂದೂ ಆಗಿ ಅಕ್ರಮವಾಗಿ ಭಾರತೀಯ ಸಾರ್ವಭೌಮತ್ವ ಪಡೆದಿದ್ದ, ಮಹಿಳೆಯೊಬ್ಬಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ರೋನಿ ಬೇಗಂ ಅಕ್ರಮವಾಗಿ ಗಡಿ ನುಸುಳಿದ್ದ ಮಹಿಳೆ. ಬೇಗಂ 2006 -2007 ರಲ್ಲಿ ಅಕ್ರಮವಾಗಿ ಭಾರತದ ಗಡಿ ನುಸುಳಿದ್ದು, 2015 ರಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದಳು. ಅವಳು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಟೈಲರಿಂಗ್ ಮಾಡಿಕೊಂಡಿದ್ದಳು. ಮಹಿಳೆಯು ನಿತೀನ್ ಕುಮಾರ್ ಎಂಬಾತನನ್ನು ಮುಂಬೈನಲ್ಲಿ ವಿವಾಹವಾಗಿದ್ದಳು. ಹಿಂದೂ ಸಂಪ್ರದಾಯದಂತೆ ವಿವಾಹವಾಗಿ ಹೆಸರು ಬದಲಿಸಿಕೊಂಡು ಪಾಯಲ್ ಗೋಷ್ ಎಂದು ಮರು ನಾಮಕರಣ ಮಾಡಿಕೊಂಡಿದ್ದಳು.

ನಕಲಿ ದಾಖಲೆ ಕೊಟ್ಟು ಭಾರತದ ಪ್ರಜೆಯಾಗಿ ಮಾರ್ಪಾಡು ಮಾಡಿಕೊಂಡಿದ್ದಳು. ಈ ವೇಳೆ ಬಾಂಗ್ಲಾಗೆ ಪ್ರಯಾಣ ಮಾಡುವಾಗ ಏರ್ ಪೋರ್ಟ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ. ಮಹಿಳೆಯು ನಕಲಿ ದಾಖಲೆ ಮುಖಾಂತರ ಓಟರ್ ಐಡಿ, ಆಧಾರ್ ಕಾರ್ಡ್ ಕ್ರಿಯೇಟ್ ಮಾಡಿಕೊಂಡಿದ್ದು, ವೆಸ್ಟ್ ಬೆಂಗಾಲ್ ಏರ್ ಪೋರ್ಟ್‍ನಲ್ಲಿ ಲಾಕ್ ಆಗಿದ್ದಾಳೆ.

ಈ ಕುರಿತು FRRO ಸೂಚನೆ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಒಂದೂವರೆ ವರ್ಷದ ನಂತರ ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ರವಿಕುಮಾರ್ ಹಾಗೂ ಸಬ್ ಇನ್ಸ್ಪೆಕ್ಟರ್ ನವೀನ್ ಪ್ರಸಾದ್ ಪರಿಶ್ರಮದಿಂದ ರೋನಿ ಬೇಗಂ ಅರೆಸ್ಟ್ ಆಗಿದ್ದಾಳೆ . ಮಹಿಳೆ ಅಕ್ರಮವಾಗಿ ದಾಖಲಾತಿ ಮಾಡಿಕೊಟ್ಟವರನ್ನು ಸಹ ಹುಡುಕಲು ಪೊಲೀಸರು ಬಲೆ ಬೀಸಿದ್ದಾರೆ.

Edited By : Vijay Kumar
PublicNext

PublicNext

27/01/2022 09:36 am

Cinque Terre

41.53 K

Cinque Terre

3

ಸಂಬಂಧಿತ ಸುದ್ದಿ