ಆನೇಕಲ್ : 2017ರಲ್ಲಿ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡೂವರೆ ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲೋಕನಾಥ ಬಹದ್ದೂರ್ ಗೆ 10 ವರ್ಷ ಜೈಲು ಶಿಕ್ಷೆ 5 ಸಾವಿರ ಜುಲ್ಮಾನೆ ವಿಧಿಸಿ ಶ್ರೀ ಕೃಷ್ಣನ ಜನ್ಮಸ್ಥಾನಕ್ಕೆ ಕಳಿಸಿಕೊಟ್ಟಿದ್ದಾರೆ.
ಹೌದು ಅರೋಪಿ ಲೋಕನಾಥ್ ಬಹುದ್ದೂರ್ ಎಂಬಾತ ಲೈಂಗಿಕ ಕಿರುಕುಳ ಕೊಟ್ಟು ಮಗುವನ್ನ ಚೆನ್ನೈಗೆ ಕರೆದೊಯ್ದಿದ್ದ ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಆ ವೇಳೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗಜೇಂದ್ರ ಸಬ್ ಇನ್ಸ್ಪೆಕ್ಟರ್ ಹಾಗೂ ಇನ್ಸ್ ಪೆಕ್ಟರ್ ರಾಜೇಶ್ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಆರೋಪಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಕೋರ್ಟಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ವರಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶ್ರೀಕಾಂತ್ ಅಡ್ಡ ಆರೋಪಿ ಲೋಕನಾಥ್ ಬಹುದ್ದೂರ್ ಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ಜುಲ್ಮಾನೆ ವಿಧಿಸಿದೆ.ಇನ್ನು ಸರ್ಕಾರದಿಂದ ಮಗುವಿಗೆ ನಾಲ್ಕು ಲಕ್ಷ ರೂ.ಪರಿಹಾರ ನೀಡಲಾಗಿದ್ದು, ಕಡೆಗೂ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
21/04/2022 07:06 pm