ಬೆಂಗಳೂರು:ಸಹಾಯಕ ಪ್ರಾಧ್ಯಾಪಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಕ್ಕೆ ಸಂಬಂಧಿಸದಂತೆ ಓರ್ವ ಮಹಿಳಾ ಅತಿಥಿ ಉಪನ್ಯಾಸಕಿಯನ್ನು ಬಂಧಿಸಿ ಮತ್ತೊಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.
ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆ ಸಂಬಂಧ ಪರೀಕ್ಷೆ ನಡೆಯುವ ಮುನ್ನವೇ ವಾಟ್ಸಾಪ್ ನಲ್ಲಿ ಪ್ರಶ್ನೆಪತ್ರಿಕೆ ಹರಿದಾಡಿತ್ತು. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಲ್ಲೇಶ್ವರಂ ಪೊಲೀಸರಿಗೆ ದೂರು ನೀಡಿತ್ತು.
ಈಗಾಗಲೇ ಮಹಿಳಾ ಅತಿಥಿ ಉಪನ್ಯಾಸಕಿಯನ್ನು ಬಂಧಿಸಲಾಗಿದೆ. ಮೈಸೂರು ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕಮಲ್ ಪಂತ್ ಹೇಳಿದ್ದಾರೆ.
PublicNext
27/04/2022 09:24 pm