ಬೆಂಗಳೂರು: ಡೆಲ್ಲಿ ಪಬ್ಲಿಕ್ ಶಾಲೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ 16 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಗರದ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಹಾರೋಹಳ್ಳಿ ನಿವಾಸಿ ಕೀರ್ತನಾ ಮೃತ ದುರ್ದೈವಿಯಾಗಿದ್ದಾಳೆ.
ಬೈಕ್‌ನಲ್ಲಿ ಹರ್ಷಿತಾ, ದರ್ಶನ್ ಮತ್ತು ಕೀರ್ತನಾ ತ್ರಿಬಲ್ ರೈಡ್ ಹೋಗುತ್ತಿದ್ದರು. ಈ ವೇಳೆ ಫ್ಲೈಓವರ್ ಮೇಲಿಂದ ವೇಗವಾಗಿ ಬಂದ ಬಸ್ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದ ತೀವ್ರತೆಗೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನೂ ಘಟನೆಗೆ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯ ಚಾಲನೆ ಕಾರಣ ಎಂದು ಹೇಳಲಾಗ್ತಿದೆ. ಇತ್ತ ಸ್ಥಳಕ್ಕೆ ಬನಶಂಕರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
PublicNext
26/05/2022 01:25 pm