ಬೆಂಗಳೂರು: ವ್ಯವಹಾರದಲ್ಲಿ ಅನೇಕ ಅಕ್ರಮಗಳ ಆರೋಪ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ರಿಯಲ್ ಎಸ್ಟೇಟ್ ಸಂಸ್ಥೆ ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಶಕ್ಕೆ ಪಡೆದುಕೊಂಡಿದೆ.
ಇ.ಡಿ ಸಮನ್ಸ್ ಜಾರಿ ಹಿನ್ನಲೆ ನಿನ್ನೆ (ಶುಕ್ರಾವಾರ) ಸುಶೀಲ್ ಪಾಂಡುರಂಗ್ ವಿಚಾರಣೆಗೆ ಹಾಜರಾಗಿದ್ದರು. ಹಲವು ಗಂಟೆಯ ವಿಚಾರಣೆ ಬಳಿಕ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ವರ್ಷ ಮಂತ್ರಿ ಗ್ರೂಪ್ ಮೇಲೆ ಐಟಿ ದಾಳಿ ಮಾಡಿತ್ತು. ಈ ವೇಳೆ ಅನೇಕ ದಾಖಲೆಗಳ ಸಮೇತ ಇಡಿಗೆ ಮಾಹಿತಿ ಲಭ್ಯವಾಗಿದ್ದು, ಸದ್ಯ ಅದೇ ಮಾಹಿತಿ ಆಧಾರದಲ್ಲಿ ನೋಟೀಸ್ ಜಾರಿಗೊಳಿಸಲಾಗಿದೆ. ಇಂದು ಸುಶೀಲ್ ಪಾಂಡುರಂಗ ಅವರು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಹಾಜರಾಗುವ ಸಾಧ್ಯತೆಗಳಿದೆ.
ಪ್ರಿವೆನ್ಷನ್ ಆಫ್ ಮನಿ ಲ್ಯಾಂಡರಿಂಗ್ ಆಕ್ಟ್ ಅಡಿ ಇಡಿ ಸುಶೀಲ್ ಪಾಂಡುರಂಗ್ ಮೇಲೆ ಪ್ರಕರಣ ದಾಖಲಿಸಿತ್ತು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಮಾಡಲಾಗುತ್ತು.
PublicNext
25/06/2022 12:40 pm