ಬೆಂಗಳೂರು: ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಮೂರು ದಿನದ ಹಿಂದೆ ಪೀಣ್ಯ ಎಸ್ಆಗರ್‌ಎಸ್ ಸರ್ಕಲ್ ಬಳಿ ಮೂವರು ಯುವಕರು ಗಾಂಜಾ ಸೇವಿಸುತ್ತಿದ್ದರು. ಈ ಬಗ್ಗೆ ಪೀಣ್ಯಾ ಪೊಲೀಸರು ಖಚಿತ ಮಾಹಿತಿ ಪಡೆದು ಸ್ಥಳಕ್ಕೆ ಹೋದಾಗ ಅಲ್ಲಿದ್ದ ಯುವಕರು ಪೊಲೀಸರನ್ನು ನೋಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ರವಿ ಎಂಬ ಯುವಕ ಬಿಲ್ಡಿಂಗ್ ಹತ್ತಿ ಎಸ್ಕೇಪ್ ಆಗಲು ಯತ್ನಿಸಿದ್ದ. ಬಿಲ್ಡಿಂಗ್ ಹಾರುವ ವೇಳೆ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ರವಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ರವಿ ಮೃತಪಟ್ಟಿದ್ದಾನೆ. ಇನ್ನು ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
PublicNext
30/06/2022 06:19 pm