ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪರಪ್ಪನ ಅಗ್ರಹಾರಕ್ಕೆ ಸಚಿವ ಆರಗ ದಿಢೀರ್ ಭೇಟಿ; ಅಧಿಕಾರಿಗಳಿಗೆ ಮಾತಿನ ಚಾಟಿ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಹಾಗೂ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಿಂದಲೇ ಮಾಡಿದ tiktok ವೀಡಿಯೊ ಸಾಕಷ್ಟು ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಲ ಪೊಲೀಸ್ ಅಧಿಕಾರಿಗಳೇ ಕೈದಿಗಳಿಗೆ ವಿಶೇಷ ಆತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆ ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡರು.

ಹೈ ಸೆಕ್ಯೂರಿಟಿ ಬ್ಯಾರಕ್ ಪರಿಶೀಲನೆ ಹಾಗೂ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಲಾಗಿದೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸಿದ ಸಚಿವರು, ಸ್ವತಃ ಸೆಲ್‌ ನಲ್ಲಿ ತಪಾಸಣೆಯನ್ನೂ ನಡೆಸಿದರು. ಈ ಸಂದರ್ಭ ಮಹಿಳಾ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು ವಿಚಾರಿಸಿದರು.

Edited By : Manjunath H D
PublicNext

PublicNext

12/07/2022 03:45 pm

Cinque Terre

29.61 K

Cinque Terre

2

ಸಂಬಂಧಿತ ಸುದ್ದಿ