ಬೊಮ್ಮನಹಳ್ಳಿ: ದಲಿತ ಸಂಘರ್ಷ ಸಮಿತಿ ಅಂಬೇಡ್ಕರವಾದ ವತಿಯಿಂದ ದಲಿತರ ಮೇಲಿನ ದಮನ ಕಾರ್ಯ ನೀತಿ ವಿರೋಧಿಸಿ ಮತ್ತು ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಬೊಮ್ಮನಹಳ್ಳಿ ಬಿಬಿಎಂಪಿ ಕಚೇರಿಯೆದುರು ಪ್ರತಿಭಟನೆಯನ್ನು ನಡೆಸಲಾಯಿತು.
ಇನ್ನು ಪ್ರತಿಭಟನೆ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು ಸರ್ಕಾರದ ವಿರೋಧಿ ನೀತಿಗಳನ್ನು ಮತ್ತು ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಲ್ಲೆ ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಬೊಮ್ಮನಹಳ್ಳಿ ಬಿಬಿಎಂಪಿ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮಾಡಲಾಯಿತು ಇನ್ನು ಪ್ರತಿಭಟನಾ ರ್ಯಾಲಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಸಂಘಟನೆ ಹೋರಾಟಗಾರರು ಭಾಗಿಯಾಗಿದ್ದರು.
Kshetra Samachara
19/07/2022 03:21 pm