ಅನೇಕಲ್ : ದೇವಸ್ಥಾನದಲ್ಲಿದ್ದ ಬೆಳ್ಳಿ ಕಿರೀಟ ಮತ್ತು ದೇವರ ಒಡವೆಗಳನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವೆಂಕಟೇಶ್ವರ ಟಾಕೀಸ್ ಸಮೀಪದ ಪಾರಬ್ ಜ್ಞಾನ ಸಿದ್ಧಾಂತ ಆಶ್ರಮದಲ್ಲಿ ನಡೆದಿದೆ.
ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮೂರು ಜನ ಚಡ್ಡಿ ಗ್ಯಾಂಗ್ ಕೈಯಲ್ಲಿ ರಾಡ್, ಚಾಕು ಹಿಡಿದು ದೇವಸ್ಥಾನ ಒಳ ಪ್ರವೇಶ ಮಾಡಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ .ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/07/2022 11:16 am