ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಾಳಿಗೆ ಕೊಳ್ಳಿಯಿಟ್ಟ ಖಿನ್ನತೆ; ಸ್ಟಾಫ್ ನರ್ಸ್ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಸ್ಟಾಫ್ ನರ್ಸ್ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಮಿತ್ರಾ (32 ವರ್ಷ) ಮೃತ ನರ್ಸ್ ಆಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

32 ವರ್ಷವಾದ್ರೂ ಸುಮಿತ್ರಾಗೆ ಮದುವೆಯಾಗಿರಲಿಲ್ಲ. ಈ ಬಗ್ಗೆ ಮಾನಸಿಕವಾಗಿ ತುಂಬಾ ನೊಂದಿದ್ದ ಸುಮಿತ್ರಾ ಖಿನ್ನತೆಯಿಂದ ಬಳಲುತ್ತಿದ್ದರು. ಕುಟುಂಬಸ್ಥರೊಂದಿಗೆ ವಾಸವಿದ್ದ ಸುಮಿತ್ರಾ, ಮುಂಜಾನೆ ಕುಟುಂಬಸ್ಥರು‌ ಕೋಣೆ ಬಾಗಿಲು ತಟ್ಟಿದರೂ ಬಾಗಿಲು ಓಪನ್ ಮಾಡಿರಲಿಲ್ಲ.

ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಸುಮಿತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಗಿರಿನಗರ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದರು. ಈ ವೇಳೆ ಡೆತ್ ನೋಟ್ ಪತ್ತೆಯಾಗಿದ್ದು, "ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ಖುಷಿಯಾಗಿ ಕಳುಹಿಸಿಕೊಡಿ" ಎಂದು ಸುಮಿತ್ರಾ ಬರೆದಿದ್ದಾರೆ‌. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಗೆ ರವಾನಿಸಲಾಗಿದೆ.

Edited By :
PublicNext

PublicNext

22/07/2022 03:43 pm

Cinque Terre

25.61 K

Cinque Terre

0

ಸಂಬಂಧಿತ ಸುದ್ದಿ