ಬೆಂಗಳೂರು: ಎಣ್ಣೆ ವಿಚಾರಕ್ಕೆ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ಕೊಲೆಯಿಂದ ಅಂತ್ಯವಾಗಿದೆ. ತಡರಾತ್ರಿ ಬೆಂಗಳೂರಿನ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಘಟನೆ ನಡೆದಿದೆ. 30 ವರ್ಷ ವಯಸ್ಸಿನ ಪ್ರಶಾಂತ್ ಕೊಲೆಯಾಗಿದ್ದಾನೆ.
ತಡರಾತ್ರಿ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಪ್ರಶಾಂತ್ ಮತ್ತು ಆತನ ಸ್ನೇಹಿತರು ಎಣ್ಣೆ ಪಾರ್ಟಿ ಮಾಡ್ತಿದ್ರು. ಈ ವೇಳೆ ಎಣ್ಣೆ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ಆರಂಭವಾಗಿದೆ. ಜಗಳ ತಾರಕಕ್ಕೇರಿದ ಬಳಿಕ ಸ್ನೇಹಿತರೇ ಪ್ರಶಾಂತ್ ತಲೆಗೆ ಬಾಟಲಿಯಿಂದ ಹಲ್ಲೆಗೈದಿದ್ದಾರೆ. ಪರಿಣಾಮ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದು ಘಟನೆ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
28/07/2022 03:06 pm