ಬೆಂಗಳೂರು: ಬಿಟಿಎಂ ಲೇಔಟ್ ಎರಡನೇ ಹಂತದ ಮಡಿವಾಳ ಕೆರೆಯ ರಸ್ತೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇಂದು ಬೆಳಗ್ಗೆ ಸಾರ್ವಜನಿಕರು ವಾಕಿಂಗ್ ಮಾಡುತ್ತಾ ಮಡಿವಾಳ ಕೆರೆ ಬಳಿ ಬಂದಾಗ ಮೃತದೇಹ ಕಂಡ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಬೊಮ್ಮನಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಮೇಲ್ನೋಟಕ್ಕೆ ಕೊಲೆ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದು ತನಿಖೆ ಬಳಿಕ ನಿಜಾಂಶ ಹೊರಬರಲಿದೆ.
ಮೃತಪಟ್ಟಿರುವ ಮಹಿಳೆಯ ವಯಸ್ಸು 35ರಿಂದ 40 ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು..
PublicNext
11/08/2022 02:26 pm