ಬೆಂಗಳೂರು: ಎಣ್ಣೆ ನಶೆಯಲ್ಲಿ ರಸ್ತೆ ಬದಿ ಸಿಕ್ಕ ಸಿಕ್ಕ ವಾಹನಗಳನ್ನು ಕದ್ದು ನಂಬರ್ ಪ್ಲೇಟ್ ಬದಲಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.
ನದೀಂ ಅಹಮದ್, ಗುಲಾಂ ಹುಸೇನ್ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಎಸ್ಕೇಪ್ ಆಗಿದ್ದು ಪೊಲೀಸರು ತಲಾಶ್ ನಡೆಸಿದ್ದಾರೆ. ಬಂಧಿತರು ಕುಡಿತದ ಚಟಕ್ಕೆ ದಾಸರಾಗಿ ವಿಲಾಸಿ ಜೀವನ ನಡೆಸಲು ಕಳ್ಳತನಕ್ಕೆ ಇಳಿದಿದ್ದರು.
ಹೀಗಾಗಿ ವಾಹನಗಳ ಹ್ಯಾಂಡ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದೇ ಮತ್ತದೇ ಪ್ರವೃತ್ತಿ ಮುಂದುವರೆಸಿದ್ದರು. ಸದ್ಯ ಬಂಧಿತರಿಂದ 2 ಆಟೋ, 1 ಕಾರು, 6 ಬೈಕ್ ಗಳನ್ನು ಜಪ್ತಿ ಮಾಡಲಾಗಿದೆ. ಈ ಖತರ್ನಾಕ್ ಗಳು ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಹುಳಿಮಾವು, ಚಂದ್ರಾಲೇಔಟ್ ವ್ಯಾಪ್ತಿಯಲ್ಲಿ ತಮ್ಮ ಕೈಚಳಕ ತೋರಿಸಿದ್ದರು. ಸದ್ಯ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಸುವವರ ಜೊತೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದವರು ಪೊಲೀಸರ ಅತಿಥಿಗಳಾಗಿದ್ದಾರೆ.
PublicNext
14/08/2022 01:39 pm