ಬೆಂಗಳೂರು: ಹೋಟೆಲ್‌ನಲ್ಲಿ ಯುವತಿ ಜೊತೆ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಕೆ.ಪಿ.ಅಗ್ರಹಾರ ಇನ್ಸ್‌ಪೆಕ್ಟರ್ ಅಮಾನತಾಗಿದ್ದಾರೆ.
ಕೆ ಪಿ ಅಗ್ರಹಾರ ಇನ್ಸ್‌ಪೆಕ್ಟರ್ ಗೋಪಾಲ್ ಕೃಷ್ಣ ಗೌಡನನ್ನು ಅಮಾನತು ಮಾಡಿ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ಆದೇಶಿಸಿದ್ದಾರೆ. ಇನ್ಸ್‌ಪೆಕ್ಟರ್ ಗೋಪಾಲ್ ಕೃಷ್ಣ ಗೌಡ ಹೋಟೆಲ್‌ಗೆ ತೆರಳಿದ್ದಾಗ ಮದ್ಯದ ಮತ್ತಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಹಿನ್ನೆಲೆ ನೊಂದ ಯುವತಿ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.
Kshetra Samachara
28/08/2022 10:13 pm