ಬೆಂಗಳೂರು: ಪಿಎಸ್ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಸಿಐಡಿ ಅಧಿಕಾರಿಗಳು ಒಪ್ಪಿಸಿದ್ದಾರೆ.
ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆ ವೇಳೆ ಹಲವು ಸಂಗತಿ ಬಯಲಿಗೆ ಬಂದಿವೆ. ಅಮೃತ್ ಪಾಲ್ ಅಕ್ರಮದಲ್ಲಿ ನೇರವಾಗಿ ಭಾಗಿಯಾಗದೆ ಪರೋಕ್ಷವಾಗಿ ಕೃತ್ಯ ಎಸಗಿರುವುದನ್ನು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಸಮಗ್ರ ತನಿಖೆ ನಡೆಸಲು ಸರ್ಕಾರಕ್ಕೆ ತಾನೇ ಸಲಹೆ ನೀಡಿರುವುದಾಗಿ ವಿಚಾರಣೆ ವೇಳೆ ಅಮೃತ್ ಪೌಲ್ ಹೇಳಿಕೆ ನೀಡಿದ್ದಾರೆ.
ತನಿಖೆವೇಳೆ 'ನಾನೇನು ತಪ್ಪು ಮಾಡಿಲ್ಲ. ನಾನು ನಂಬಿಕೆಯಿಂದ ಕೆಳ ಹಂತದ ಅಧಿಕಾರಿಗೆ ಸ್ಟ್ರಾಂಗ್ ರೂಮ್ ಕೀ ಕೊಟ್ಟಿದ್ದೆ. ಆದರೆ ಅವರು ಪಿಎಸ್ಐ ಪರೀಕ್ಷೆಯ ಉತ್ತರ ಪತ್ರಿಕೆ ತಿದ್ದಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರಲ್ಲಿ ನನ್ನ ಪಾತ್ರವಿಲ್ಲ. ಸಮಗ್ರ ತನಿಖೆ ನಡೆಸಲ್ಪಟ್ಟ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದೇ ನಾನು ಎಂದು ಹೇಳಿಕೆ ನೀಡಿರುವುದು ಸಿಐಡಿ ಮೂಲಗಳು ತಿಳಿಸಿವೆ.
ಪಿಎಸ್ಐ ಪ್ರಕರಣ ಸಂಬಂಧ ಹೈಗ್ರೌಂಡ್ಸ್, ಹಲಸೂರು, ರಾಮಮೂರ್ತಿನಗರ, ಯಲಹಂಕ ನ್ಯೂಟೌನ್ ಹಾಗೂ ಕೋರಮಂಗಲ ಐದು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸಿಐಡಿ ಡಿವೈಎಸ್ಪಿ ಶೇಖರ್ ಬಂಧಿಸಿ ವಿಚಾರಣೆ ನಡೆಸಿದ್ದರು. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಹರೀಶ್, ಪಿಎಸ್ಐ ಮನೋಜ್ ಕುಮಾರ್ ಪರೀಕ್ಷಾ ಅಕ್ರಮ ಎಸಗಿದ ಪ್ರಕರಣದಡಿ ಪಾಲ್ ಅವರನ್ನು ಡಿವೈಎಸ್‌ಪಿ ಎನ್. ಶ್ರೀಹರ್ಷ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು.
PublicNext
12/09/2022 10:26 pm