ಬೆಂಗಳೂರು: ಎಸಿಬಿ ರದ್ದಾಗಿ ಮತ್ತೆ ಲೋಕಾಯುಕ್ತ ಕಾರ್ಯರಾಂಭ ಮಾಡಿರೋ ಹಿನ್ನೆಲೆ ಎಸಿಬಿ ಕಾರ್ಯನಿರ್ವಹಿಸುತ್ತಿದ್ದ ಬೆಂಗಳೂರು ಕಚೇರಿ ಸೇರಿ ರಾಜ್ಯ ವಿಭಾಗವಾರು ಎಸಿಬಿ ಕಚೇರಿಗಳನ್ನೇ ಲೋಕಾಯುಕ್ತ ಕಚೇರಿಗಳನ್ನಾಗಿ ಮಾಡುವಂತೆ ಲೋಕಾಯುಕ್ತ ಬಿ.ಎಸ್ ಪಾಟೀಲ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದ್ರ ಜೊತೆಗೆ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯನ್ನ ಯಥಾವತ್ ಆಗಿ ವರ್ಗಾಯಿಸುವಂತೆ ಪತ್ರದಲ್ಲಿ ತಿಳಿಸಲಾಗಿದೆ.
ಕಳೆದ ಆರು ವರ್ಷಗಳ ಬಳಿಕ ಪೊಲೀಸ್ ಬಲ ಪಡೆದುಕೊಂಡಿರುವ ಲೋಕಾಯುಕ್ತ ಈಗಾಗಲೇ ಭ್ರಷ್ಟರಿಗೆ ಸಿಂಹಸ್ವಪ್ನವಾಗುವ ಸೂಚನೆ ನೀಡಿದೆ.
ಪ್ರಕರಣ ವರ್ಗಾಯಿಸುವುದರ ಜೊತೆಗೆ ಎಸಿಬಿಯಲ್ಲಿ ಬಳಸುತ್ತಿದ್ದ ವಾಹನಗಳು, ಉಪಕರಣಗಳು, ಡಿಜಿಟಲ್ ಸಾಕ್ಷ್ಯಾಧಾರಗಳು, ಎಲೆಕ್ಟ್ರಾನಿಕ್ ಡಿವೈಸ್ ಗಳು ಸೇರಿ ಇನ್ನಿತರ ಸೌಲಭ್ಯಗಳನ್ನು ಹಸ್ತಾಂತರಿಸುವಂತೆ ಪತ್ರದಲ್ಲಿ ಲೋಕಾಯುಕ್ತರು ಉಲ್ಲೇಖಿಸಿದ್ದಾರೆ. ಇಗಾಗ್ಲೆ ವರ್ಗಾವಣೆ ಪ್ರಕ್ರಿಯೆಯನ್ನು ಎಸಿಬಿ ನಡೆಸುತ್ತಿದೆ. ಪ್ರಕರಣ ಹಸ್ತಾಂತರ ಬಳಿಕ ತನಿಖೆ ಹಾಗೂ ವಿಚಾರಣೆ ನಡೆಸಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ಅಗತ್ಯವಿದೆ. ದಾಳಿ ಅಥವಾ ಟ್ರ್ಯಾಪ್ ಕಾರ್ಯಾಚರಣೆ ನಡೆಸಲು ವಾಹನಗಳ ಅವಶ್ಯಕತೆಯಿದೆ. ಲೋಕಾಯುಕ್ತ ಪ್ರಧಾನ ಕಚೇರಿ ಕಿರಿದಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ನಿಯೋಜನೆಯಾದರೆ ಸ್ಥಳಾವಕಾಶ ತೊಂದರೆಯಾಗಲಿದೆ. ಜಿಲ್ಲಾ ಲೋಕಾಯುಕ್ತ ಕಚೇರಿಗಳಲ್ಲಿ ಇದೇ ಪರಿಸ್ಥಿತಿ ಎದುರಾಗಲಿದೆ. ಹೀಗಾಗಿ ಪ್ರಸ್ತಕ ಕಾರ್ಯನಿರ್ವಹಿಸುತ್ತಿದ್ದ ಎಸಿಬಿ ಕಚೇರಿಗಳನ್ನೇ ಲೋಕಾಯುಕ್ತ ಕಚೇರಿಗಳಾಗಿ ಪರಿವರ್ತಿಸಬೇಕು. ಎಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಪಿಎಸ್ ಹಾಗೂ ಕೆಪಿಎಸ್ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ನಿಯೋಜಿಸಬೇಕು. ಇನ್ನೂ ಎಸಿಬಿ ಹಾಗೂ ಲೋಕಾಯುಕ್ತದಲ್ಲಿರುವ ಅಧಿಕಾರಿ, ಸಿಬ್ಬಂದಿ ವಿವರ ನೋಡೋದಾದ್ರೆ.
ಲೋಕಾಯುಕ್ತ-ಎಸಿಬಿ
ಎಡಿಜಿಪಿ - 01 01
ಎಸ್ಪಿ- 10 23
ಡಿವೈಎಸ್ಪಿ- 35 43
ಪಿಐ - 75 90
ಪಿಎಸ್ಐ - 00 13
ಎಸ್ಐಐ - 00 04
ಸಿಎಚ್ ಸಿ- 50 145
ಸಿಪಿಸಿ- 150 234
ಡ್ರೈವರ್ಸ್- 81 148
ಒಟ್ಟು- 447 747
PublicNext
14/09/2022 08:47 pm