ನೆಲಮಂಗಲ: ಕಾಡು ಪ್ರಾಣಿಗಳ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆರೋಪಿಗಳು ಬೇಟೆ ಬಳಿಕ ಹರಾಜಿನಲ್ಲಿ ಕಾಡು ಪ್ರಾಣಿಗಳ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಕ್ಷಣವೇ ಆರೋಪಿಗಳು ಮೊಲ, ಕಾಡುಕೋಳಿ, ಕೊಕ್ಕರೆ ಸೇರಿದಂತೆ ಇತರೆ ಪ್ರಾಣಿಗಳ ಸಹಿತ ಪರಾರಿಯಾಗಿದ್ದಾರೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳ ಬಗ್ಗೆ ನಿಖರ ಮಾಹಿತಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಕ್ಕಿಲ್ಲ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ 9 ರೀತ್ಯ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
PublicNext
07/01/2022 10:16 pm