ಬೆಂಗಳೂರು: ಮದುವೆಗೆ ಅಂತ ಊರಿನಿಂದ ಬಂದಿದ್ದ ವ್ಯಕ್ತಿಯೊಬ್ಬ ಬಾರ್ ಮುಂದೆ ಹೆಣವಾಗಿ ಪತ್ತೆಯಾಗಿದ್ದಾನೆ! ಮಾಗಡಿ ರಸ್ತೆಯ ವೀರೇಶ್ ಚಿತ್ರಮಂದಿರ ಬಳಿಯ ಕಾರ್ತಿಕ್ ಬಾರ್ ಮುಂದೆ ಇಂದು ಬೆಳ್ಳಂ ಬೆಳಿಗ್ಗೆ ಶವ ಪತ್ತೆಯಾಗಿದ್ದು, ಮೃತನನ್ನು ಮಾಗಡಿ ಮೂಲದ ಉಮೇಶ್ ಎಂದು ಗುರುತಿಸಲಾಗಿದೆ.
ಮೊದಲಿಗೆ ಯಾರೋ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿತ್ತು.
ಪೊಲೀಸ್ರು ಬಂದು ಸ್ಥಳ ಪರಿಶೀಲನೆ ನಡೆಸಿದಾಗ ಕುಡಿದ ಮತ್ತಿನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು
ಗೋವಿಂದರಾಜನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸ್ತಿದ್ದಾರೆ.
ಕುಟುಂಬಸ್ಥರ ಮಾಹಿತಿ ಪ್ರಕಾರ ಉಮೇಶ್, ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ನಿನ್ನೆ ನಾಲ್ವರೊಂದಿಗೆ ಬೆಂಗಳೂರಿಗೆ ಬಂದಿದ್ದ ಎಂದು ಮಾಹಿತಿ ಲಭಿಸಿದೆ.
Kshetra Samachara
21/04/2022 03:19 pm