ಸರ್ವೇ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕೊಲೆ ಪ್ರಕರಣ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪಶ್ಚಿಮ ಬಂಗಾಳದ ಬುರುದ್ವಾ ಜಿಲ್ಲೆ ಮೂಲದ ವಿಕಾಸ್ ಮೂಡಿ ಹತ್ಯೆಗೊಳಗಾದ ಕಾರ್ಮಿಕ. ಈತ ಇಂದು ಮುಂಜಾನೆ 5.30ರ ಸುಮಾರಿಗೆ ಕೆಲಸ ಮುಗಿಸಿ ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ವಿಕಾಸ್ ಹೊಟ್ಟೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಎಲ್ ಅಂಡ್ ಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್ ನಮ್ಮ ಮೆಟ್ರೋದಲ್ಲಿ ಸರ್ವೇ ಕಾರ್ಯ ಮುಗಿಸಿ ಮನೆಗೆ ಹಿಂತಿರುವಾಗ ಹಂತಕರು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಕೃತ್ಯ ಸಂಬಂಧ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿರುವ ಪುಲಕೇಶಿನಗರ ಪೊಲೀಸರು ಹಂತಕರ ಪತ್ತೆಗಾಗಿ ಮೂರು ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಗಿದೆ. ಹಣಕ್ಕಾಗಿ ಕೊಲೆ ಮಾಡಿರುವ ಸಾಧ್ಯತೆ ಶಂಕಿಸಲಾಗಿದ್ದು ತನಿಖೆ ಮುಂದುವರೆದಿದೆ.
PublicNext
14/06/2022 04:59 pm