ಬೆಂಗಳೂರು: ಬಿಕಾಂ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ತಾಲೂಕಿನ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಈ ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಪ್ರಶಾಂತ್ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಒಳಗಾದ ಬಿಕಾಂ ವಿದ್ಯಾರ್ಥಿ. ಪ್ರಶಾಂತ್ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಪ್ರಶಾಂತ್ ಜಯನಗರದ ವಿಜಯ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತಿದ್ದರು ಕಳೆದ ವಾರದಿಂದ ಕಾಲೇಜಿನಲ್ಲಿ ಯುವಕರ ಜೊತೆ ಗಲಾಟೆ ಮಾಡಿಕೊಂಡಿದ್ದರಂತೆ ಎಂದು ಕಾಲೇಜಿನ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.
ಇನ್ನು ನಿನ್ನೆ ರಾತ್ರಿ ಊಟ ಮುಗಿಸಿ ರೂಮ್‌ನಲ್ಲಿ ಮಲಗಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳಿಕ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿಯಲ್ಲಿ ಮಾರ್ಗದಲ್ಲಿ ಮೃತಪಟ್ಟಿದ್ದಾಗಿ ಬೆಳಕಿಗೆ ಬಂದಿದೆ.
Kshetra Samachara
27/06/2022 06:12 pm