ಹಿಂದೂ ಟೈಲರ್ ಕನ್ಹಯ್ಯ ಲಾಲ್ ಕಗ್ಗೊಲೆ ಖಂಡಿಸಿ ಸಿಲಿಕಾನ್ ಸಿಟಿಯಲ್ಲಿ ಬುಧವಾರ ಸಾಕಷ್ಟು ಪ್ರತಿಭಟನೆಗಳು ನಡೆದವು. ಚಿಕ್ಕಪೇಟೆಯಲ್ಲಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು. ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟು ಮುಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೊಂದೆಡೆ ನಿನ್ನೆ ಸಂಜೆ ಮೈಸೂರು ಬ್ಯಾಂಕ್ ವೃತ್ತದಿಂದ ಪ್ರತಿಭಟನೆ ನಡೆಸಲು ಹಿಂದೂ ಜನ ಜಾಗೃತಿ ಸಮಿತಿ ಮತ್ತು ಶ್ರೀರಾಮಸೇನೆ ಮುಖಂಡರು ಮುಂದಾದರು. ಡಿಸಿ ಕಚೇರಿಗೆ ತೆರಳಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಪತ್ರ ಸಲ್ಲಿಸಿದರು. ಮಳೆ ಮಧ್ಯೆಯೇ ಟೌನ್‌ಹಾಲ್ ಬಳಿ ಜಾಥಾ ನಡೆಯಿತು.
ಹೀಗಾಗಿ ಚಿಕ್ಕಪೇಟೆ, ಹಲಸೂರು ಠಾಣಾ ವ್ಯಾಪ್ತಿಯ ಸುತ್ತಮುತ್ತ ಪೊಲೀಸರು ಮೊಕ್ಕಾಂ ಹೂಡಿದ್ದರು. ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೈಲರ್ಟ್ ಇರುವಂತೆ ಕಮಿಷನರ್ ಪ್ರತಾಪ್ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
PublicNext
30/06/2022 12:05 pm