ಬೆಂಗಳೂರು: ಐಪಿಎಲ್ ಪಂದ್ಯಗಳ ಸೋಲು ಗೆಲುವಿನ ಲೆಕ್ಕಾಚಾರದ ಮೇಲೆ ಬೆಟ್ಟಿಂಗ್ ಆಡುತ್ತಿದ್ದ ಮತ್ತೊಂದು ಜಾಲವನ್ನು ರಾಜಧಾನಿ ಪೊಲೀಸರು ಪತ್ತೆ ಮಾಡಿದ್ದಾರೆ. ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿ ಹಣ ಕಟ್ಟಿಸಿಕೊಳ್ಳುತ್ತಿದ್ದ ಮೂವರು ಬುಕ್ಕಿಗಳನ್ನು ನಗರದ ಮಡಿವಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಕೊಲ್ಕತ್ತ ನೈಟ್ ರೈಡರ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಹಾಗೂ ಬಂಧಿತರಿಂದ 10ಲಕ್ಷದ 41 ಸಾವಿರ ರೂ. ಮೌಲ್ಯದ ಕಾರು, 59 ಸಾವಿರ ನಗದು,ಒಂದು ಬೈಕ್ ಸೇರಿದಂತೆ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Kshetra Samachara
10/10/2021 10:06 am