ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೈಸ್ ರಸ್ತೆಯಲ್ಲಿ ವಾಹನಗಳ ಅಡ್ಡಗಟ್ಟಿ ಸುಲಿಗೆ: ಮೂವರ ಬಂಧನ

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಮೂವರು ಯುವಕರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಸುನಿಲ್, ಹರೀಶ್ ಮತ್ತು ನವೀನ್‌ ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಪ್ಲಾನ್ ಮಾಡಿದ ನಂತರ ರಸ್ತೆ ಮಧ್ಯೆ ವಾಹನ ತಡೆದು ಚಾಕುವಿನಿಂದ ಹಲ್ಲೆ ಮಾಡುತ್ತಿದ್ದರು. ಬಳಿಕ ಚಿನ್ನಾಭರಣ, ಹಣ, ದುಬಾರಿ ವಸ್ತುಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದರು.

ಆರೋಪಿಗಳು ಕಳೆದ ಶುಕ್ರವಾರ ಇಂತಹುದ್ದೇ ಕೃತ್ಯ ನಡೆಸಿದ್ದರು. ನಾಯಂಡಹಳ್ಳಿಯಲ್ಲಿ ಓರ್ವ ಆರೋಪಿ ಕ್ಯಾಂಟರ್ ಹತ್ತಿದ್ದ. ಬಳಿಕ ದಾರಿ ಮಧ್ಯೆ ಮತ್ತೆ ಮೂವರು ಆರೋಪಿಗಳು ಕ್ಯಾಂಟರ್ ಹತ್ತಿದ್ದರು. ಅದಾದ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಮೊಬೈಲ್ ಹಾಗು ಹಣ ದೋಚಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕೋಣನಕುಂಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

12/10/2021 04:53 pm

Cinque Terre

924

Cinque Terre

0

ಸಂಬಂಧಿತ ಸುದ್ದಿ