ಆನೇಕಲ್: ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಘಟನೆ ಆನೇಕಲ್‌ನ ಅತ್ತಿಬೆಲೆ-ಟಿವಿಎಸ್ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಅತ್ತಿಬೆಲೆಯ ದೀಪಕ್ ಹಾಗೂ ಮಾಯಸಂದ್ರದ ಬಾಸ್ಕರ್ ಕೊಲೆಯಾದವರು ಎಂದು ಗುರುತಿಸಲಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಗಲಾಟೆಯಾಗಿದ್ದು, ಮತ್ತೊಂದು ಗುಂಪಿನವರು ದೀಪಕ್ ಹಾಗೂ ಬಾಸ್ಕರ್‌ರನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅತ್ತಿಬೆಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಮೃತದೇಹಗಳ ಪಕ್ಕದಲ್ಲಿ ಎರಡು ಬೈಕ್ಗಳು ಪತ್ತೆಯಾಗಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
22/10/2021 01:00 pm