ಬೆಂಗಳೂರು : ಅಪಾರ್ಟ್ಮೆಂಟ್ ಬೇಸ್ಮೆಂಟ್ ನಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ನಗರದ ಸದಾಶಿವನಗರದಲ್ಲಿ ನಡೆದಿದೆ.
ಇನ್ನು ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ಎಂಬುವವರಿಗೆ ಸೇರಿದ ರೇಂಜ್ ರೋವರ್ ಕಾರು ಇದಾಗಿದ್ದು ಹಳೆ ವೈಷಮ್ಯಕ್ಕೆ ಕಿಡಿಗೇಡಿಗಳಿಂದ ಈ ಕೃತ್ಯ ಎಸಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣ ಭಸ್ಮವಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ.
Kshetra Samachara
23/10/2021 12:38 pm