ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನಿಗೆ ಕಂಟಕ ಶುರುವಾಗಿದೆ. ಹಲ್ಲೆಗೈದ ಆರೋಪ ಎದುರಿಸುತ್ತಿರುವ ಸ್ನೇಹಿತೇಶ್ ಹಾಗೂ ಆತನ ಸ್ನೇಹಿತರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಅವರ ಬಂಧನಕ್ಕಾಗಿ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣದ ಹಿಂದೆ ಯಾವುದೇ ರಾಜಕೀಯ ಒತ್ತಡವಿಲ್ಲ. ಮುಲಾಜಿಲ್ಲದೇ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದು ಮುಖರ್ಜಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಸದ್ಯದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಪ್ರಕರಣದಲ್ಲಿ ಪೊಲೀಸರೇನಾದರೂ ನಿರ್ಲಕ್ಷ್ಯ ವಹಿಸಿದ್ದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಮಲ ಪಂತ್ ಹೇಳಿದ್ದಾರೆ.
Kshetra Samachara
26/10/2021 06:02 pm