ಬೆಂಗಳೂರು: ನಗರದ ಅತ್ತಿಗುಪ್ಪೆಯಲ್ಲಿ ಮಾಜಿ ಕಾರ್ಪೋರೇಟರ್ 55 ವರ್ಷದ ಶಿವಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಪ್ಪ ಅತ್ತಿಗುಪ್ಪೆಯ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.
ಮನೆಯವರು ಬಂದ ಮೇಲೆ ಘಟನೆ ಬಗ್ಗೆ ತಿಳಿದುಬಂದಿದೆ. ಇನ್ನು ಮೃತ ಶಿವಪ್ಪ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ. ಇವರು ಸಕ್ರಿಯ ರಾಜಕಾರಣದಲ್ಲೂ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಚಂದ್ರಾಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೆ ತಿಳಿದುಬಂದಿಲ್ಲ.
Kshetra Samachara
18/11/2021 06:37 pm