ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿವೆಯೇ ? ಕಾಂಚಾಣವಿಲ್ಲದೆ ಯಾವ ಕೆಲಸವೂ ಆಗೋದಿಲ್ಲವೇ ? ಈ ರೀತಿಯ ಗಂಭೀರ ಆರೋಪವನ್ನು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡುತ್ತಿದೆ.
ರಾಜ್ಯದ ಮುಖ್ಯ ಕಾಮಗಾರಿಗಳನ್ನು ನಿರ್ವಹಿಸುವ ಲೋಕೋಪಯೋಗಿ, ಜಲ ಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಆರೋಗ್ಯ ಇಲಾಖೆಯಲ್ಲಿ ಲಂಚಾವತಾರ ತಾಂಡವವಾಡುತ್ತಿದೆ. ಮಂಜೂರಾದ ಅನುದಾನದ ಅರ್ಧದಷ್ಟು ಲಂಚದ ರೂಪದಲ್ಲೇ ಕೊಳ್ಳೆಯಾಗುತ್ತಿದೆ ಎಂದು ಸಂಘ ದೂರಿದೆ.ಈ ಸಂಬಂಧ ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿ ದೂರನ್ನು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ನೀಡಿದೆ.
ಗುತ್ತಿಗೆದಾರರು ಶೇ.40 ಮೊತ್ತದಷ್ಟು ಹಣವನ್ನು ಲಂಚದ ರೂಪದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನೀಡಬೇಕು. ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಸಂಘ ದೂರು ಸಲ್ಲಿಸಿದೆ.
Kshetra Samachara
19/11/2021 10:38 am