ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮನೆ ಮುಂದಿನ ಬೈಕ್ ಕದ್ದಿದ್ದ ಕಳ್ಳ ಕೊನೆಗೂ ಸಿಕ್ಕಿಬಿದ್ದ- 11 ದ್ವಿಚಕ್ರ ವಾಹನಗಳು ವಶ

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ರೋಹಿತ್ ರೆಡ್ಡಿ ಹಾಗೂ ರೇವಂತ್ ಬಂಧಿತರು. ಆರೋಪಿಗಳು ಇದೇ ಅಕ್ಟೋಬರ್ 28ರ ರಾತ್ರಿ 9:30ರಂದು ಮನೆಯೊಂದರ ಮುಂದೆ ನಿಲ್ಲಿದ್ದ ಬೈಕ್ ಕದ್ದು ಪರಾರಿಯಾಗಿದ್ದರು. ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಶಾಂತ್.ಎಂ ಹಾಗೂ ಸಿಬ್ಬಂದಿ ಪತ್ತೆ ಹಚ್ಚಿ, ಬಂಧಿಸಿದ್ದಾರೆ.

ಬಂಧಿತರನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಕಾಮಾಕ್ಷಿಪಾಳ್ಯ, ಕೆಂಗೇರಿ, ಕೆ.ಆರ್.ಪುರಂ, ಬಾಗಲಗುಂಟೆ, ಮಾದನಾಯಕನಹಳ್ಳಿ, ಪಾಂಡವಪುರ, ಶಾಂತಿಗ್ರಾಮ, ಹೊಳೆನರಸೀಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು 5,42,000 ರೂ. ಬೆಲೆ ಬಾಳುವ 11 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

Edited By : Vijay Kumar
Kshetra Samachara

Kshetra Samachara

19/11/2021 02:48 pm

Cinque Terre

132

Cinque Terre

0

ಸಂಬಂಧಿತ ಸುದ್ದಿ