ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್‌ಐಟಿ ಪೊಲೀಸರಿಂದ ನಕಲಿ ಛಾಪಾ ಕಾಗದ ಸೃಷ್ಟಿಸಿದ ಐವರ ಬಂಧನ

ಬೆಂಗಳೂರು:ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಹುಸೇನ್ ಮೋದಿ ಬಾಬು, ಸೀಮಾ, ನಯಾಜ್ ಅಹ್ಮದ್, ಶಬ್ಬೀರ್ ಅಹ್ಮದ್, ಹರೀಶ್​ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 63 ಲಕ್ಷ ರೂಪಾಯಿ ಮೌಲ್ಯದ ನಕಲಿ ಛಾಪಾ ಕಾಗದ ವಶಕ್ಕೆ ಪಡೆದಿದ್ದಾರೆ. ಹೈಕೋರ್ಟ್ ಸೂಚನೆ ಮೇರೆಗೆ ರಚನೆಯಾಗಿದ್ದ ಎಸ್‌ಐಟಿ ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆಸಿದ್ದು, ಐವರು ಆರೋಪಿಗಳನ್ನು ಸದ್ಯ ವಿಚಾರಣೆಗೊಳಪಡಿಸಲಾಗಿದೆ.

ನಕಲಿ ಛಾಪಾ ಕಾಗದ ಸಂಬಂಧ ರಚನೆಯಾಗಿದ್ದ ಎಸ್​ಐಟಿ ತಂಡದ ಕಾರ್ಯಾಚರಣೆ ವೇಳೆ ನಕಲಿ ಛಾಪಾ ಕಾಗದ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.2 ರೂಪಾಯಿ ಛಾಪಾ ಕಾಗದದಿಂದ 25 ಸಾವಿರ ರೂ. ಮೌಲ್ಯದ ಛಾಪಾ ಕಾಗದದವರೆಗೂ‌ ಎಲ್ಲವನ್ನೂ ನಕಲಿ‌ ಮಾಡುತ್ತಿದ್ದ ಆರೋಪಿಗಳು, ನಕಲಿ ಫಾಂಟ್ , ಸೀಲ್. ಸ್ಕ್ರೀನ್ ಪ್ರಿಂಟಿಂಗ್ ಬಳಸಿ ಚಾಪಾ ಕಾಗದ ಸೃಷ್ಟಿ ಮಾಡುತ್ತಿದ್ದರು.

ಮೈಸೂರು ಮಹರಾಜರ ಕಾಲದ ರೀತಿಯ ಛಾಪಾ ಕಾಗದ ಕೂಡ ಆರೋಪಿಗಳು ಸೃಷ್ಟಿ ಮಾಡಿದ್ದು, ಹಳೆಯ ಆಸ್ತಿ ಕಬಳಿಸುವ ಉದ್ದೇಶದಿಂದ ಇಂತಹ ನಕಲಿ ಛಾಪಾ ಕಾಗದ ಸೃಷ್ಟಿಯಾಗುತ್ತಿತ್ತು ಎನ್ನುವುದು ತಿಳಿದುಬಂದಿದೆ. ಸದ್ಯ ಹಳೆಯ ಸ್ಟಾಂಪ್ ಪೇಪರ್ ಮತ್ತು ಹೊಸ ಪೇಪರ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಕಮಿಷನರ್ ಕಮಲ್ ಪಂತ್ ತನಿಖಾ ತಂಡವನ್ನ ಪ್ರಶಂಸಿಸಿದ್ದಾರೆ.

Edited By :
Kshetra Samachara

Kshetra Samachara

19/11/2021 02:54 pm

Cinque Terre

542

Cinque Terre

0

ಸಂಬಂಧಿತ ಸುದ್ದಿ