ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಡಿಎ ಮೇಲೆ ದಾಳಿ: ಎಸಿಬಿಗೆ ಸಿಕ್ಕಿದ್ದೇನು ಗೊತ್ತೆ ? ಇಲ್ಲಿದೆ ನೋಡಿ ವಿವರ

ಬೆಂಗಳೂರು: ಹಣ ವಸೂಲಿ ಆರೋಪದ ಮೇಲೆ ಬೆಂಗಳೂರಿನ ಬಿಡಿಎ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿ ದಾಳಿ ಮಾಡಿದ್ದರು. ಎರಡು ದಿನವೂ 50 ಕ್ಕೂ ಅಧಿಕಾರಿಗಳು ಪರಿಶೀಲನೆ ಮಾಡಿದರು. ಮಾಡಿದ ಬಳಿಕ ಈಗ ಅಲ್ಲಿ ಏನೆಲ್ಲ ಪತ್ತೆ ಮಾಡಿದ್ದೇವೆ ಅನ್ನೊದನ್ನ ಎಸಿಬಿ ಅಧಿಕಾರಿಗಳು ಈಗ ಪತ್ರಿಕಾ ಪ್ರಕಟಣೆ ಮೂಲಕವೇ ಬಹಿರಂಗ ಪಡಿಸಿದ್ದಾರೆ. ಅವು ಇಂತಿವೆ ನೋಡಿ.

====

1) ಅರ್ಕಾವತಿ ಬಡಾವಣೆ, ಕೆಂಪೇಗೌಡ ಬಡಾವಣೆ, ವಿಶ್ವೇಶ್ವರಯ್ಯ ಬಡಾವಣೆ 75 ಕೋಟಿ ಬೆಲೆ ಬಾಳುವ 6 ನಿವೇಶನಗಳನ್ನ ಸುಳ್ಳು ಮಾಹಿತಿ ನೀಡಿ ನಕಲಿ ದಾಖಲೆ ಸೃಷ್ಠಿಸಿರುವುದು ಪತ್ತೆ.

2) ಕೆಂಗೇರಿ ಹೊಬಳಿಯಲ್ಲಿ ಉಲ್ಲಾಳ ಗ್ರಾಮದಲ್ಲಿ 1.5 ಕೋಟಿ ಮೌಲ್ಯದ ಅಕ್ರಮ ನಿವೇಶನಗಳು ಮಂಜೂರು.

3) ಸ್ಯಾಟಲೈಟ್ ಟೌನ್ ಬಳಿ 80 ಲಕ್ಷ ಮೌಲ್ಯದ ನಿವೇಶನ ಅಕ್ರಮವಾಗಿ ಮಂಜೂರು.

4) ಚಂದ್ರಾಲೇಔಟ್ ನಲ್ಲಿ2400 ಚದರ ಅಡಿಯ 5 ಕೋಟಿ ಮೌಲ್ಯದ ನಿವೇಶನ ಅಕ್ರಮ ಮಂಜೂರು.

5) ಕೆಂಪೇಗೌಡ ಲೇಔಟ್ ನಲ್ಲಿ 30 ಲಕ್ಷ ಮೌಲ್ಯದ ಅಕ್ರಮ ನಿವೇಶನ ಮಂಜೂರು.

6) ಒಂದು ನಿವೇಶನವನ್ನ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳಿಗೆ ನೊಂದಣಿ ಈ ಕುರಿತು ತನಿಖೆ.

7) ವಿಶ್ವೇಶ್ವರಯ್ಯ ಲೇಔಟ್ ನಲ್ಲಿ 52 ಲಕ್ಷ ಮೌಲ್ಯದ ನಿವೇಶನ ಅಕ್ರಮವಾಗಿ ಮಂಜೂರು.

8) ಅರ್ಕಾವತಿ ಲೇಔಟ್ ನಲ್ಲಿ ಪಲಾನುಭವಿಗಳಿಗಲ್ಲದೆ ಬೇರೆಯವರಿಗೆ ನಿವೇಶನ ಮಂಜೂರು.

9) ಕೆಂಪೇಗೌಡ ಲೇಔಟ್,ಶಿವರಾಮ ಕಾರಂತ ಲೇಔಟ್,ಮೊದಲಾದ ಕಡೆ ಅಧಿಕಾರಿಗಳು ಮತ್ತು ಮದ್ಯವರ್ತಿಗಳೊಂದಿಗೆ ಅಕ್ರಮವಾಗಿ ಸೈಟ್ ಗಳ ಮಂಜೂರು.

10) ಕೋಟ್ಯಾಂತರ ಮೌಲ್ಯದ ಪರಿಹಾರ ಧನ ಸದರಿ ವಯಕ್ತಿಗಳಿಗೆ ನೀಡದೆ ಬೇರೆಯವರಿಗೆ ನೀಡಿರುವುದು ಪತ್ತೆ.

11) ಅಂಜನಾಪುರ ಬಡಾವಣೆಯಲ್ಲಿ ಮೂಲ ಮಾಲೀಕನಿಗಲ್ಲದೆ ಬೇರೆಯವರಿಗೆ ನಿವೇಶನ ನೀಡಿರುವ ದಾಖಲೆ ಪತ್ತೆ.

12) ಅರ್ಕಾವತಿ ಲೇಔಟ್ ಸೇರಿದಂತೆ ಇತರೆ ಕಡೆ ಅರ್ಜಿದಾರರಿಂದ ಹಣ ಪಡೆದು ನಿವೇಶನ ನೀಡದೆ ತೊಂದರೆ ಕೊಟ್ಟಿರುವ. ಅಧಿಕಾರಿಗಳು

13) ಅರ್ಜಿದಾರರಿಗೆ ನಿವೇಶನ ಹಂಚಿಕೆ ಪತ್ರ ನೀಡದೆ ವಿಳಂಭ ಮಾಡಿರುವು ಪತ್ತೆ.

ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನ ವಶಕ್ಕೆ ಪಡೆದು ಎಸಿಬಿ ಅಧಿಕಾರಿಗಳು ತಮ್ಮ ಕಚೇರಿಗೆ ಕೊಂಡೊಯ್ದಿದ್ದಾರೆ.

Edited By :
Kshetra Samachara

Kshetra Samachara

20/11/2021 05:54 pm

Cinque Terre

196

Cinque Terre

0

ಸಂಬಂಧಿತ ಸುದ್ದಿ