ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀಗ ಹಾಕಿದ ಮನೆಗಳೇ ಟಾರ್ಗೆಟ್ : ಖದೀಮರು ಅರೆಸ್ಟ್

ಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ನಿರಂತರವಾಗಿ ಜೈಲಿಗೆ ಹೋಗಿಬಂದರೂ ಬುದ್ಧಿ ಕಲಿಯದ ಖದೀಮ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಮನೆಗಳ್ಳತನ ಮಾಡುತ್ತಿದ್ದರು. ಸದ್ಯ ಕುಖ್ಯಾತ ಚೋರನನ್ನು ಜ್ಞಾನಭಾರತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಗಾರಪೇಟೆ ಮೂಲದ ಸಯ್ಯದ್ ಅಜ್ಮದ್ ಬಂಧಿತ ಖದೀಮನಾಗಿದ್ದು ಈತನಿಂದ 2 ಲಕ್ಷ ಮೌಲ್ಯದ 407 ಗ್ರಾಂ ಚಿನ್ನ 2.5 ಕೆ.ಜಿ ಬೆಳ್ಳಿ ಸಾಮಾನು ಜಪ್ತಿ ಮಾಡಿಕೊಳ್ಳಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯ ಮನೆಯೊಂದರಲ್ಲಿ ನಾಗರತ್ನಮ್ಮ ಎಂಬುವರು ವಾಸವಾಗಿದ್ದರು. ಕಳೆದ ತಿಂಗಳು 26ರಂದು ಮಗನ ಜೊತೆ ತರಕಾರಿ ತರುವ ಸಲುವಾಗಿ ಮನೆಗೆ ಬೀಗ ಹಾಕಿಕೊಂಡು ತೆರಳಿದ್ದರು.

ಈ ವೇಳೆ ಹಾಡಹಾಗಲೇ ಮನೆಗೆ ನುಗ್ಗಿದ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಸಂಗತಿ ಬೆಳಕಿಗೆ ಬಂದಿತ್ತು. ಈ ಸಂಬಂಧ ಜ್ಞಾನಭಾರತಿ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣದ ತನಿಖೆ ಶುರು ಮಾಡಿದ ಪೊಲೀಸರು ಖದೀಮನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/11/2021 02:43 pm

Cinque Terre

128

Cinque Terre

0

ಸಂಬಂಧಿತ ಸುದ್ದಿ