ವರದಿ: ಗಣೇಶ್ ಹೆಗಡೆ
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿರುವ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಗೌರವ್ ಗುಪ್ತಾ ಹಾಗೂ ಉತ್ತರ ನಗರ ಯೋಜನೆ ಜಂಟಿ ನಿರ್ದೇಶಕ ಮಂಜೇಶ್ ವಿರುದ್ಧ ಎಸಿಬಿ ಮತ್ತು ಬಿಎಂಟಿಎಫ್‍ಗೆ ದಾಖಲೆ ಸಮೇತ ದೂರು ನೀಡಿದ್ದಾರೆ.
ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್, ಮುಖ್ಯ ಆಯುಕ್ತ ಗೌರವ್ ಗುಪ್ತ ಬಿಲ್ಡರ್ ಮಾಫಿಯಾದೊಂದಿಗೆ ಕೈ ಜೋಡಿಸಿ ಪಾಲಿಕೆ ಬೊಕ್ಕಸಕ್ಕೆ ಕೋಟ್ಯಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿದರು.
ನಕ್ಷೆ ಮಂಜೂರಾತಿ ಶುಲ್ಕ ವಸೂಲಿಗೆ ಬಿಬಿಎಂಪಿಗೆ ಅವಕಾಶ ನೀಡಬಾರದು ಎಂದು ಸಲ್ಲಿಕೆಯಾದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ಶುಲ್ಕ ವಸೂಲಿ ಮಾಡದಂತೆ ಪಾಲಿಕೆಗೆ ಆದೇಶಿಸಿದೆ.
ಇದರಿಂದ ಪ್ರತಿವರ್ಷ ಬಿಬಿಎಂಪಿ ಸಂಗ್ರಹಿಸುತ್ತಿದ್ದ 60 ಕೋಟಿ ರೂ. ಗಳಿಗೂ ಹೆಚ್ಚು ಆದಾಯ ಖೋತಾ ಆಗಿದೆ.
ಆಯುಕ್ತರ ಈ ನಿರ್ಧಾರದಿಂದ ಪ್ರತಿವರ್ಷ ಸಂಗ್ರಹವಾಗುತ್ತಿದ್ದ 600 ಕೋಟಿ ರೂ. ಆದಾಯದ ಬದಲಿಗೆ ಕೇವಲ 130 ಕೋಟಿ ರೂ. ಮಾತ್ರ ಸಂಗ್ರಹವಾಗುತ್ತಿದೆ ಎಂದು ಅವರು ದೂರಿದರು.
Kshetra Samachara
24/11/2021 06:40 pm