ದೊಡ್ಡಬಳ್ಳಾಪುರ : ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಾಮರಿ ನಡೆದಿದ್ದು, ಎರಡು ಕಡೆಯವರು WWF ಮಾದರಿ ಫೈಟ್ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮ ಬೂದಿಗೆರೆ ರಸ್ತೆಯಲ್ಲಿ ನಡೆದಿದೆ.
ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆಯಿಂದ ಎರಡು ಗುಂಪುಗಳ ನಡುವೆ ವಾದ ವಿವಾದ ನಡೆದಿತ್ತು ಮಧ್ಯಾಹ್ನದ ವೇಳೆ ಕೈ ಕೈ ಮಿಲಾಯಿಸುವ ಹಂತ ತಲುಪಿ,ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ದೊಣ್ಣೆ, ಕುಡುಗೋಲು ಹಿಡಿದು ಹೊಡೆದಾಡಿದ್ದಾರೆ, ಎರಡು ಗುಂಪುಗಳ ನಡುವೆ ಜಗಳ ಬಿಡಿಸಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದಾರೆ. ದೇವನಹಳ್ಳಿ ಟೌನ್ ಸ್ಟೇಷನ್ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Kshetra Samachara
26/11/2021 05:56 pm