ಬೆಂಗಳೂರು: ಹೊಟ್ಟೆನೋವು ತಾಳಲಾರದೇ ಫ್ಯಾನಿಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಮಾದನಾಯಕನಹಳ್ಳಿ ಸಮೀಪದ ಸಿದ್ಧನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿದ್ಧನಹೊಸಹಳ್ಳಿ ಗ್ರಾಮದ ನಿವಾಸಿ ನಾರಾಯಣಪ್ಪ, ಮುನಿಲಕ್ಷ್ಮಮ್ಮ ದಂಪತಿಗಳ ದ್ವಿತೀಯ ಪುತ್ರಿ ಶಿಲ್ಪ (22) ವರ್ಷದ ಮೃತ ದುರ್ದೈವಿ ಯುವತಿ ಪೀಣ್ಯದ ಪ್ರತಿಷ್ಠಿತ ಕಾಲೇಜಿನ ದ್ವಿತೀಯ ಎಂ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಇನ್ನೂ ಹೆಣ್ಣು ಮಕ್ಕಳಿಗೆ ಕಾಣಿಸುವ ಸ್ವಾಭಾವಿಕ ಹೊಟ್ಟೆ ನೋವಿನ ಬಾಧೆ ತಾಳಲಾರದೇ ಮನೆಯ ಫ್ಯಾನಿಗೆ ವೇಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
27/11/2021 10:38 pm