ಬೆಂಗಳೂರು: ಇಳಿ ವಯಸ್ಸಿನಲ್ಲಿ ಪತ್ನಿ ಶೀಲ ಶಂಕಿಸಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ಪತ್ನಿಯ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಗಂಡ ತಲೆ ಮರೆಸಿಕೊಳ್ಳುವ ಭರದಲ್ಲಿ ಪ್ರಾಣವನ್ನೇ ಕಳೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ನಿಸಾರ್ ಹಣವಾಗಿ ಪತ್ತೆಯಾದ ಪತಿ. ಆಡುಗೋಡಿಯ ರಾಜೇಂದ್ರನಗರದಲ್ಲಿ ನವಂಬರ್ 19ರಂದು ನಿಸಾರ್ ತನ್ನ ಪತ್ನಿ ಆಯೇಷಾಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಲೆ ಮಾಡಿದ್ದ. ಪತ್ನಿಗೆ ಬೆಂಕಿ ಹಚ್ಚಿದ್ದರಿಂದ ಬೆಂಕಿಯಿಂದಾಗಿ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ನಿಸಾರ್ ಕೈ ಹಾಗೂ ಮೈ ಭಾಗಕ್ಕೆ ಗಾಯಗಳಾಗಿದ್ದವು. ಗಾಯದ ಮಧ್ಯೆಯೇ ನಿಸಾರ್ ಆಂಧ್ರ ಪ್ರದೇಶಕ್ಕೆ ಪರಾರಿಯಾಗಿದ್ದ. ನಂತರ ಮದನಪಲ್ಲಿಯಲ್ಲಿ ಇರುವುದನ್ನು ಪೊಲೀಸರು ಪತ್ತೆಹಚ್ಚಿ ಹುಡಕಿದಾಗ ನಿಸಾರ್ ಶವವಾಗಿ ಪತ್ತೆಯಾಗಿದ್ದಾನೆ.
ಶವ ಪರೀಕ್ಷೆಯಲ್ಲಿ ಪೊಲೀಸರು ತೆರಳುವ ಎರಡು ದಿನ ಮುಂಚೆ ನಿಸಾರ್ ಸತ್ತಿರುವ ವಿಷಯ ಬೆಳಕಿಗೆ ಬಂದಿದ್ದು. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Kshetra Samachara
28/11/2021 11:39 am