ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 2 ತಿಂಗಳು ಶವಾಗಾರದಲ್ಲೇ ಕೊಳೆತ ಕೋವಿಡ್ ಶವ; ತನಿಖೆಗೆ ಸಮಿತಿ ರಚನೆ

ಬೆಂಗಳೂರು: ಇಎಸ್ ಐ ಆಸ್ಪತ್ರೆಯಲ್ಲಿ ಕೋವಿಡ್ ಶವ ಕೊಳೆತ ಪ್ರಕರಣ ಸಂಬಂಧ ಉನ್ನತ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ.

ಈ ಬಗ್ಗೆ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದ್ದು, ಸಮಿತಿ ಸಮಗ್ರ ವಿಚಾರಣೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸಲಿದೆ ಎಂದು ತಿಳಿಸಿದೆ.

ನ. 27ರ ಬೆಳಗ್ಗೆ 10.30ಕ್ಕೆ ಹಳೆ ಶವಾಗಾರದಲ್ಲಿ ಕೋವಿಡ್ ನಿಂದ ಮೃತಪಟ್ಟ ಎರಡು ದೇಹಗಳು ಪತ್ತೆ ಆಗಿದ್ದವು. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಮಹಜರು ಮಾಡಿದ್ದರು. ದುರ್ಗಾ ಹಾಗೂ ಮುನಿರಾಜು ಮೃತಪಟ್ಟವರಾಗಿದ್ದರು. ಆದರೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ಆಗಬೇಕೆಂಬ ಒತ್ತಾಯ ಸಂಬಂಧಿಕರದ್ದಾಗಿತ್ತು.

Edited By : Nagaraj Tulugeri
Kshetra Samachara

Kshetra Samachara

01/12/2021 10:20 am

Cinque Terre

300

Cinque Terre

0

ಸಂಬಂಧಿತ ಸುದ್ದಿ