ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಅಮೃತಹಳ್ಳಿಯ ವೀರಣ್ಣ ಪಾಳ್ಯದಲ್ಲಿ ನಡೆದಿದೆ.

ಸಂಗೀತಾ (26) ನೇಣಿಗೆ ಶರಣಾದ ಟೆಕ್ಕಿ. ವಿನಯ್ ಹಾಗೂ ಸಂಗೀತಾ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ವಿನಯ್ ಕಳೆದ ಕೆಲ ದಿನಗಳಿಂದ ಸಂಗೀತಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಸಂಗೀತಾ ಪತಿ ವಿನಯ್ ವಿರುದ್ಧ ಡೆತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಮೃತಹಳ್ಳಿ ಪೊಲೀಸರು ವಿನಯ್ ವಶಕ್ಕೆ ಪಡೆದಿದ್ದಾರೆ.

Edited By : Vijay Kumar
Kshetra Samachara

Kshetra Samachara

10/12/2021 11:02 am

Cinque Terre

1.21 K

Cinque Terre

0

ಸಂಬಂಧಿತ ಸುದ್ದಿ