ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಬಳಿ ಚಿನ್ನದ ಮಾಂಗಲ್ಯ ಸರ ಕದಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇಮ್ತಿಯಾಜ್ ಎಂಬಾತನೇ ಬಂಧಿತ ಆರೋಪಿ. ಬಂಧಿತನಿಂದ 3 ಲಕ್ಷ ಬೆಲೆಬಾಳುವ 70 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಳಿ ಚಿನ್ನದ ಸರ ಕದ್ದ ಆರೋಪ ಈತನ ಮೇಲಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Kshetra Samachara
12/12/2021 10:32 pm