ಬೆಂಗಳೂರು: ನೈಟ್ ಕರ್ಫ್ಯೂ ಮಧ್ಯೆಯೂ ಗಾಂಜಾ ಮತ್ತಿನಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ.
ಅಶೋಕ ನಗರದ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪುಂಡರ ಅಟ್ಟಹಾಸದ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶುಕ್ರವಾರ (ಜನವರಿ 7)ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಗಾಂಜಾ ನಶೆಯಲ್ಲಿ ಎಂಟ್ರಿ ಕೊಡಿದ್ದಾರೆ. ಈ ವೇಳೆ ಮನೆ ಮುಂದೆ ನಿಂತಿರುವ ಕಾರು ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಹೀಗೆ ಕಳೆದ ಮೂರು ದಿನಗಳಿಂದ ಅಶೋಕ ನಗರದ ಠಾಣಾ ವ್ಯಾಪ್ತಿಯಲ್ಲಿ ಜನರಿಗೆ ಗಾಂಜಾ ವ್ಯಸನಿಗಳ ಕಾಟ ಹೆಚ್ಚಾಗಿದೆ.
ಸದ್ಯ ಕಾರು ಮಾಲೀಕರು ಪುಂಡರ ವಿರುದ್ಧ ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
PublicNext
10/01/2022 01:56 pm