ಬೆಂಗಳೂರು : ಸಿನಿಮೀಯ ರೀತಿಯಲ್ಲಿ ಪೊಲೀಸರಿಂದಲೇ ಪೊಲೀಸರ ಮೇಲೆ ಎಫ್ ಐಆರ್ ದಾಖಲು ಮಾಡಿರುವಂತಹ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಮಗ್ಲಿಂಗ್ ಮಾಡುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಪೊಲೀಸ್ ಐಡಿ ಕಾರ್ಡ್ ತೋರಿಸಿ ಲಕ್ಷ ಲಕ್ಷ ಬೆಲೆಬಾಳುವ ರಕ್ತಚಂದನ ಹಾಗೂ ಗಾಂಜಾ ದೋಚುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳನ್ನು ಇದೀಗ ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಹೆಡ್ ಕಾನ್ಸ್ ಟೇಬಲ್ ಮೋಹನ್ ಹಾಗೂ ಮಹದೇವಪುರ ಪೊಲೀಸ್ ಠಾಣೆಯ ಮಮತೇಶ್ ಗೌಡ ಇಬ್ಬರು ರೆಡ್ ಸ್ಯಾಂಡಲ್ ಡೀಲ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿರುವ ವ್ಯಕ್ತಿಗಳು. ಕಳೆದ ಡಿಸೆಂಬರ್ 15ರಂದು ರೆಡ್ ಸ್ಯಾಂಡಲ್ ಪೊಲೀಸ್ ಐಡಿ ಕಾರ್ಡ್ ತೋರಿಸಿ ರಾಬರಿ ಮಾಡಿ ಇದೀಗ ಹೊಸಕೋಟೆ ಪೊಲೀಸರ ಅತಿಥಿಗಳಾಗಿದ್ದಾರೆ. ಈ ಕುರಿತು ಹೊಸಕೋಟೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.
Kshetra Samachara
10/01/2022 08:55 pm