ಬೆಂಗಳೂರು: ಸಚಿವ ಎಸ್.ಟಿ. ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್ ಪ್ರಕರಣದ ಅರೋಪಿ ರಾಹುಲ್ ಭಟ್ ಗೆ ಕೊರೊನಾ ಪಾಸಿಟಿವ್ ಆಗಿದೆ. ನಿನ್ನೆ ಮೆಡಿಕಲ್ ಟೆಸ್ಟ್ ನಡೆಸಿದ್ದ ವೇಳೆ ಕೋವಿಡ್ ಟೆಸ್ಟ್ ಕೂಡ ಮಾಡಿಸಲಾಗಿತ್ತು. ಇಂದು ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿಸಿಸಿಬಿ ಸಿದ್ಧತೆ ನಡೆಸಿತ್ತು. ಆದರೆ, ನ್ಯಾಯಾಧೀಶರ ಮುಂದೆ ಹಾಜರು ಪಡಿಸೋ ಮೊದಲೇ ಕೋವಿಡ್ ವರದಿ ಬಂದಿದೆ.
ಸದ್ಯ, ಆರೋಪಿ ರಾಹುಲ್ ಭಟ್ ವಿಚಾರಣೆಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಂತಾಗಿದ್ದು, ರಾಹುಲ್ ವಿಚಾರಣೆ ನಡೆಸಿದ್ದ ಸಿಸಿಬಿ ಅಧಿಕಾರಿಗಳೂ ತಪಾಸಣೆಗೆ ಒಳಗಾಗುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಇನ್ನು ವರ್ಚ್ಯುವಲ್ ಮೂಲಕ ನ್ಯಾಯಾಧೀಶರ ಮುಂದೆ ರಾಹುಲ್ ನನ್ನು ಸಿಸಿಬಿ ಅಧಿಕಾರಿಗಳು ಹಾಜರು ಪಡಿಸಲಿದ್ದಾರೆ. ಸದ್ಯ, ರಾಹುಲ್ ನನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಿ ಕೊರೊನಾ ನೆಗೆಟಿವ್ ಬಂದ ನಂತರ ಮತ್ತೆ ವಿಚಾರಣೆ ನಡೆಸೋ ಸಾಧ್ಯತೆಯಿದೆ.
PublicNext
12/01/2022 05:59 pm